ಪ್ರಧಾನ ಮಂತ್ರಿ ಉಜ್ವಲ್ ಯೋಜನೆಗೆ ಅರ್ಜಿ ಪ್ರಾರಂಭ: ಉಚಿತ ಸಿಲಿಂಡರ್ ಪಡೆಯಲು ಮಹಿಳೆಯರಿಗೆ ಸುವರ್ಣ ಅವಕಾಶ


ನಮಸ್ಕಾರ ಕನ್ನಡಿಗರೇ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ರಾಜ್ಯದ ಜನತೆಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ಅದರಲ್ಲೂ ಮುಖ್ಯವಾಗಿ ಮಹಿಳೆಯರಿಗಾಗಿ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿವೆ. ಗ್ಯಾಸ್ ಸಿಲಿಂಡರ್ ಗಳನ್ನು ಈಗಾಗಲೇ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಗ್ಯಾಸ್ ಕನೆಕ್ಷನ್ ಅನ್ನು ಕೋಟ್ಯಂತರ ಕುಟುಂಬಗಳು ಪಡೆದುಕೊಳ್ಳುತ್ತಿದ್ದಾರೆ.

Application Start for Pradhan Mantri Ujjwal Yojana
Application Start for Pradhan Mantri Ujjwal Yojana

ಎಲ್ಪಿಜಿ ಗ್ಯಾಸ್ ಸಿಲಿಂಡರ್ ಅನ್ನು ನಮ್ಮ ದೇಶದಲ್ಲಿ ಕೆಲವು ವರ್ಷಗಳ ಹಿಂದೆ ಎಲ್ಲರೂ ಕೂಡ ಬಳಸಿ ಅಡುಗೆ ಮಾಡುತ್ತಿರಲಿಲ್ಲ ಸಾಮಾನ್ಯವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಗಳನ್ನು ಸಿಟಿಗಳಲ್ಲಿ ವಾಸಿಸುವಂತಹ ಜನರು ಬಳಕೆ ಮಾಡುತ್ತಿದ್ದರು ಆದರೆ ಹಳ್ಳಿಗಳಲ್ಲಿ ವಾಸಿಸುವ ಜನರು ಒಲೆಗಳಲ್ಲಿ ಅಡುಗೆ ಮಾಡುತ್ತಿದ್ದರು. ಓಲೆಗಳಲ್ಲಿ ಅಡುಗೆ ಮಾಡುವುದರಿಂದ ಮಹಿಳೆಯರ ಆರೋಗ್ಯಕ್ಕೆ ಹೋಗೆ ಬಂದ ಕಾರಣ ಸಮಸ್ಯೆಯಾಗುತ್ತಿತ್ತು ಈ ಕಾರಣಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜನರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಮಂತ್ರಿ ಉಜ್ವಲ ಯೋಜನೆಯನ್ನು ಜಾರಿಗೆ ತಂದರು.

ಸದ್ಯ ಇದೀಗ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯದೆ ವಂಚಿತರಾದಂತಹ ಮಹಿಳೆಯರಿಗೆ ಮತ್ತೆ ಇದೀಗ ಕೇಂದ್ರ ಸರ್ಕಾರ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಿದೆ. ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು 2016ರಲ್ಲಿ ಜಾರಿಗೊಳಿಸಿದ್ದು ಭಾರತದಾದ್ಯಂತ ಈಗಾಗಲೇ ಕೋಟ್ಯಂತರ ಮಹಿಳೆಯರು ಈ ಯೋಜನೆಯ ಅಡಿಯಲ್ಲಿ ಅಡುಗೆ ಅನಿಲ ಸಂಪರ್ಕವನ್ನು ಪಡೆದಿದ್ದಾರೆ. ಸದ್ಯ ಈಗ ಮತ್ತೆ ಮಹಿಳೆಯರಿಗೆ ಉಜ್ವಲ ಉಚಿತ ಸಿಲಿಂಡರ್ ಪಡೆಯಲು ಕೇಂದ್ರ ಸರ್ಕಾರ ಅರ್ಜಿಯನ್ನು ಆಹ್ವಾನಿಸಿದೆ.

ಪ್ರಧಾನಮಂತ್ರಿ ಉಜ್ವಲ ಯೋಜನೆ 2.0 :

ಉಚಿತ ಗ್ಯಾಸ್ ಸಂಪರ್ಕದ ಜೊತೆಗೆ ಉಚಿತ ರಿಫೆಲ್ ಉಚಿತ ಸ್ಟವ್ ಅನ್ನು ಪ್ರಧಾನಮಂತ್ರಿ ಉಜ್ವಲ ಯೋಜನೆ 2.0 ಯೋಜನೆಯಡಿಯಲ್ಲಿ ಮಹಿಳೆಯರಿಗೆ ಕೇಂದ್ರ ಸರ್ಕಾರ ಒದಗಿಸುತ್ತದೆ. ಈ ಯೋಜನೆಯ ಉಪಯುಕ್ತತೆಯನ್ನು ಬಡ ಕುಟುಂಬಗಳು ಪಡೆಯಬಹುದಾಗಿದ್ದು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಅರ್ಹ ಮಹಿಳೆಯರು ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದು.

ಮೊದಲ ಬಾರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ನಂತರ ಈ ಒಂದು ಯೋಜನೆಯನ್ನು ಜಾರಿಗೆ ತಂದರು. ಪ್ರಧಾನ ಮಂತ್ರಿ ಉಜ್ವಲ ಯೋಜನೆ ಪ್ರಥಮ ಬಾರಿ ಜಾರಿಯಾದ ನಂತರ ಯೋಜನೆಯ ಪ್ರಯೋಜನವನ್ನು ಜನರು ಪಡೆಯಲು ಪ್ರಾರಂಭಿಸಿದರು. ಇದೀಗ ಕೋಟ್ಯಾಂತರ ಕುಟುಂಬಗಳು ನಮ್ಮ ದೇಶದಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಉಚಿತವಾಗಿ ಗ್ಯಾಸ್ ಸಿಲಿಂಡರ್ ಅನ್ನು ಪಡೆದುಕೊಳ್ಳುತ್ತಿದ್ದಾರೆ.

2024 ಮೇ 31ರಂದು ಪ್ರದಾನ ಮಂತ್ರಿ ಉಜ್ವಲ ಯೋಜನೆಯನ್ನು ಮತ್ತೆ ಪ್ರಾರಂಭಿಸಲಾಯಿತು. ಇದಕ್ಕೆ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0 ಹೇಳಿತು. ಇದೀಗ ಈ ಯೋಜನೆಗೆ ಸಂಬಂಧಿಸಿ ದಂತೆ ಕೇಂದ್ರ ಸರ್ಕಾರ ಮತ್ತೆ ಮಹಿಳೆಯರಿಗೆ ಅರ್ಜಿಯನ್ನು ಸಲ್ಲಿಸಲು ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. ಅದರಂತೆ ಈ ಯೋಜನೆಯ ಪ್ರಯೋಜನವನ್ನು ಅರ್ಹ ಮಹಿಳೆಯರು ಹಾಗೂ ಈ ಯೋಜನೆಯ ಪ್ರಯೋಜನದಿಂದ ವಂಚಿತರಾದಂತಹ ಮಹಿಳೆಯರು ಅರ್ಜಿಯನ್ನು ಸಲ್ಲಿಸಿ ಇದರ ಸೌಲಭ್ಯವನ್ನು ಪಡೆಯಬಹುದು.

ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0 ಅರ್ಜಿಯನ್ನು ಸಲ್ಲಿಸಲು ಅರ್ಹತೆಗಳು :

ಕೇಂದ್ರ ಸರ್ಕಾರವು 2016ರಲ್ಲಿ ಜಾರಿಗೆ ತಂದಂತಹ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ಮತ್ತೆ ಇದೀಗ ಹೊಸ ರೂಪದಲ್ಲಿ ಕೇಂದ್ರ ಸರ್ಕಾರ ಪರಿಚಯಿಸಿದ್ದು ಈ ಯೋಜನೆಗೆ ಇನ್ನಷ್ಟು ಶಕ್ತಿ ಬಂದಂತಾಗಿದೆ ಎಂದು ಹೇಳಬಹುದು. ಅದರಂತೆ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0 ಪ್ರಯೋಜನವನ್ನು ಪಡೆದುಕೊಳ್ಳಲು ಕೆಲವೊಂದು ಅರ್ಹತೆಗಳನ್ನು ಮಹಿಳೆಯರು ಪಡೆದಿರಬೇಕು ಅವುಗಳೆಂದರೆ,

  1. ಬಿಪಿಎಲ್ ರೇಷನ್ ಕಾರ್ಡನ್ನು ಹೊಂದಿದ ಮಹಿಳೆಯರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
  2. 18 ವರ್ಷ ಮೇಲ್ಪಟ್ಟ ಮಹಿಳೆಯರು ಅರ್ಜಿ ಸಲ್ಲಿಸಬಹುದು.
  3. ಗ್ಯಾಸ ಸಂಪರ್ಕ ಕುಟುಂಬದಲ್ಲಿ ಬೇರೆ ಯಾರೊಬ್ಬರ ಹೆಸರಿನಲ್ಲಿಯೂ ಕೂಡ ಇರಬಾರದು.

ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0 ಪ್ರಮುಖ ದಾಖಲೆಗಳು :

ಕೇಂದ್ರ ಸರ್ಕಾರವು ಜಾರಿಗೆ ತಂದಿರುವಂತಹ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಮಹಿಳೆಯರು ಕೆಲವೊಂದು ಪ್ರಮುಖ ದಾಖಲಾತಿಗಳನ್ನು ಹೊಂದಿರಬೇಕು.

  1. BPL ration card
  2. Passport size photo
  3. Caste certificate
  4. Bank passbook
  5. ವಿಳಾಸ ಪ್ರಮಾಣ ಪತ್ರ
    ಈ ಎಲ್ಲಾ ದಾಖಲಾತಿಗಳನ್ನು ಮಹಿಳೆಯರು ಸರಿಯಾಗಿ ಹೊಂದಿದ್ದಾಗ ಮಾತ್ರ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಈ ಯೋಜನೆಯ ಮೂಲಕ ಉಚಿತ ಸಿಲಿಂಡರನ್ನು ಪಡೆಯುವುದರಿಂದ ಮಹಿಳೆಯರಿಗೆ ಯಾವುದೇ ರೀತಿ ಆರೋಗ್ಯದ ಸಮಸ್ಯೆ ಬರುವುದಿಲ್ಲ ಸಂತೋಷದಿಂದ ಅಡುಗೆಯನ್ನು ಮಹಿಳೆಯರು ಮಾಡಬಹುದು. ಹಾಗಾಗಿ ಪುನಃ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಅರ್ಹ ಮಹಿಳೆಯರಿಂದ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಇದರ ಬಗ್ಗೆ ಮಹಿಳೆಯರು ತಿಳಿದುಕೊಂಡು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದು.

ಅರ್ಜಿ ಸಲ್ಲಿಸುವ ಪ್ರಕ್ರಿಯೆ :

ಎರಡು ರೀತಿಯಲ್ಲಿ ಪ್ರಧಾನ ಮಂತ್ರಿ ಉಜ್ವಲ ಉಜ್ವಲ ಯೋಜನೆಯಡಿ ಉಚಿತ ಸಿಲಿಂಡರ್ ಅನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಮಹಿಳೆಯರು ಅಗತ್ಯ ದಾಖಲಾತಿಗಳನ್ನು ಹೊಂದಿರಬೇಕು ಆಗ ಮಾತ್ರ ಅವರ ಅರ್ಜಿಯು ಯಶಸ್ವಿಯಾಗಿ ಸಲ್ಲಿಕೆಯಾಗುತ್ತದೆ. ಇಲ್ಲದೆ ಹೋದರೆ ವಿಫಲಗೊಳ್ಳುತ್ತದೆ. ಯಶಸ್ವಿಯಾಗಿ ಅರ್ಜಿಯನ್ನು ಸಲ್ಲಿಸಿ ಮಹಿಳೆಯರು ಪ್ರಧಾನಮಂತ್ರಿ ಉಜ್ವಲ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ. ಅರ್ಜಿಯನ್ನು ಯಾವ ರೀತಿ ಸಲ್ಲಿಸಬೇಕು ಎಂಬುದನ್ನು ಈ ಕೆಳಗಿನಂತೆ ನೋಡುವುದಾದರೆ.

  1. ತಮ್ಮ ಹತ್ತಿರದ ಗ್ಯಾಸ್ ಏಜೆನ್ಸಿಗೆ ಭೇಟಿ ನೀಡಿ ಅಗತ್ಯ ದಾಖಲಾತಿಗಳನ್ನು ಸಲ್ಲಿಸುವುದರ ಮೂಲಕ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು.
  2. ತಮ್ಮ ಹತ್ತಿರದ ಗ್ರಾಮವನ್ ಕಂಪ್ಯೂಟರ್ ಕೇಂದ್ರ ಇತರೆ ಕಂಪ್ಯೂಟರ್ ಸೇವ ಕೇಂದ್ರಗಳಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ತಮ್ಮ ಹೆಸರು ವಿಳಾಸ ಆಧಾರ್ ಕಾರ್ಡ್ ನಂಬರ್ ರೇಷನ್ ಕಾರ್ಡ್ ನಂಬರ್ ಗಳನ್ನು ಭರ್ತಿ ಮಾಡಿ ನೇರವಾಗಿ ಆನ್ಲೈನ್ ಮೂಲಕ ಪ್ರಧಾನಮಂತ್ರಿ ಜುಲೈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಲಿಂಕ್ ಮೇಲೆ ಕ್ಲಿಕ್ ಮಾಡಿ:

ಎರಡು ರೀತಿಯ ಸಿಲಿಂಡರ್ ಪಡೆಯಬಹುದು :

ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಮಹಿಳೆಯರು ಎರಡು ರೀತಿಯ ಸಿಲಿಂಡರ್ ಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ.

  1. ಮೊದಲನೆಯದು 14.2 ಕೆಜಿಯ ಒಂದು ಸಿಲಿಂಡರ್
  2. ಎರಡೆನೆಯದಾಗಿ 5 ಕೆ ಜಿ ಯ 2 ಸಿಲಿಂಡರ್ ಪಡೆಯಲು ಆಯ್ಕೆ ಮಾಡಬಹುದಾಗಿದೆ.

ಹೆಚ್ಚಿನ ಮಾಹಿತಿ :

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಸಂಬಂಧಿಸಿ ದಂತೆ ಮಹಿಳೆಯರಿಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ತಮ್ಮ ಹತ್ತಿರದ ಗ್ಯಾಸ್ ಏಜೆನ್ಸಿಗಳನ್ನು ಅಥವಾ ಸರ್ಕಾರದ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು.

ಅಧಿಕೃತ ಜಾಲತಾಣ:

ಹೀಗೆ ಕೇಂದ್ರ ಸರ್ಕಾರ ಮಹಿಳೆಯರಿಗೆ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಗ್ಯಾಸ್ ಸಿಲಿಂಡರನ್ನು ಪಡೆದುಕೊಳ್ಳಲು ಮತ್ತೊಮ್ಮೆ ಅವಕಾಶ ಕಲ್ಪಿಸಿದ್ದು ಈ ಬಗ್ಗೆ ಎಲ್ಲಾ ಮಹಿಳೆಯರಿಗೆ ತಿಳಿಸುವುದರ ಮೂಲಕ ಕೇಂದ್ರ ಸರ್ಕಾರದ ಈ ಯೋಜನೆಯ ಪ್ರಯೋಜನನ್ನು ಪ್ರತಿಯೊಬ್ಬ ಮಹಿಳೆಯರು ಪಡೆದುಕೊಳ್ಳುವಂತೆ ಮಾಡಬಹುದಾಗಿದೆ.

ಮಹಿಳೆಯರಿಗಾಗಿ ಕೇಂದ್ರ ಸರ್ಕಾರವು ಜಾರಿಗೆ ತಂದಿರುವಂತಹ ಈ ಒಂದು ಯೋಜನೆಯು ಹೆಚ್ಚು ಉಪಯುಕ್ತವಾಗಿದ್ದು ಇದರಿಂದ ಮಹಿಳೆಯರು ಉಸಿರಾಟದ ತೊಂದರೆ ಇಲ್ಲದೆ ಆರಾಮದಾಯಕವಾಗಿ ಅಡುಗೆಯನ್ನು ಮಾಡಬಹುದಾಗಿದೆ. ಒಟ್ಟಾರೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಮಹಿಳೆಯರಿಗೆ ಜಾರಿಗೆ ತರುತ್ತಿದ್ದು ಇದರ ಪ್ರಯೋಜನವನ್ನು ಪ್ರತಿಯೊಬ್ಬ ಮಹಿಳೆಯರು ಪಡೆದುಕೊಳ್ಳುವುದು ಸರ್ಕಾರದ ಆಶಯವಾಗಿದೆ. ಅದರಂತೆ ಮಹಿಳೆಯರು ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಪ್ರಯೋಜನವನ್ನು ಪಡೆಯಬಹುದು, ಧನ್ಯವಾದ.

ಇತರೆ ಪ್ರಮುಖ ವಿಷಯಗಳು:

http://ರೇಷನ್ ಕಾರ್ಡ್ ರದ್ದಾಗಿರುವವರಿಗೆ ಸಿಹಿ ಸುದ್ದಿ: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶhttp://ರೈತರಿಗೆ ಉಚಿತ ಬೋರ್ವೆಲ್ ಯೋಜನೆ : ಅರ್ಜಿ ಸಲ್ಲಿಸುವ ಸಂಪೂರ್ಣ ವಿಧಾನ ಇಲ್ಲಿದೆ ತಕ್ಷಣ ನೋಡಿ


Leave a Comment