ನಮಸ್ಕಾರ ಕನ್ನಡಿಗರೇ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ರಾಜ್ಯದ ಜನತೆಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಹಾಗೂ ಜಾರಿಗೆ ತರುತ್ತಿವೆ. ಸದ್ಯ ಈಗ ಸರ್ಕಾರ ಸಮಾಜ ಕಲ್ಯಾಣ ಇಲಾಖೆಯ ಬರುವ ಡಾಕ್ಟರ್ ಬಿಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಫುಡ್ ಕಾರ್ಟ್ ವಾಹನವನ್ನು ಖರೀದಿ ಮಾಡಲು ಅರ್ಹ ಮತ್ತು ಆಸಕ್ತಿ ಹೊಂದಿದ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಒಂದು ಯೋಜನೆಯ ಸೌಲಭ್ಯವನ್ನು ಯಾರೆಲ್ಲಾ ಪಡೆಯಬಹುದು ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆಗಳೇನು? ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳ ಬಗ್ಗೆ ಪೂರ್ಣವಾದಂತ ಮಾಹಿತಿಯನ್ನು ಈ ಕೆಳಗಿನಂತೆ ನೋಡಬಹುದು.
ಸ್ವಾವಲಂಬಿ ಸಾರಥಿ ಯೋಜನೆ :
ಸಮಾಜ ಕಲ್ಯಾಣ ಇಲಾಖೆಯ ಡಿ ಬರುವಂತಹ ಡಾಕ್ಟರ್ ಬಿಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಫುಡ್ ಕಾರ್ಡ್ ಉದ್ದೇಶಕ್ಕಾಗಿ ವಾಹನವನ್ನು ಖರೀದಿ ಮಾಡಲು ಸ್ವಾವಲಂಬಿ ಸಾರಥಿ ಯೋಜನೆಯ ಅಡಿಯಲ್ಲಿ ಬ್ಯಾಂಕ್ ಸಹಯೋಗದಲ್ಲಿ ಶೇಕಡ 75 ರಷ್ಟು ಸಹಾಯಧನವನ್ನು ಹಾಗೂ ಗರಿಷ್ಠ ನಾಲ್ಕು ಲಕ್ಷದವರೆಗೆ ಸಹಾಯಧನವನ್ನು ಪಡೆಯಲು ಸರ್ಕಾರ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಡಾ. ಬಿಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ 4 ಲಕ್ಷ ಸಬ್ಸಿಡಿಯಲ್ಲಿ ಫುಡ್ ಕಾರ್ಟ್ ವಾಹನವನ್ನು ಖರೀದಿ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಪ್ರಕ್ರಿಯೆ :
4 ಲಕ್ಷ ಸಬ್ಸಿಡಿಯಲ್ಲಿ ಫುಟ್ ಕಾರ್ಡ್ ವಾಹನವನ್ನು ಖರೀದಿ ಮಾಡಲು ಡಾ. ಬಿಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಲು ಕೊನೆಯ ದಿನಾಂಕ ಮುಗಿಯುವುದರ ಒಳಗಾಗಿ ಅರ್ಹ ಅಭ್ಯರ್ಥಿಗಳು ಕೆಲವೊಂದು ವಿಧಾನಗಳನ್ನು ಅನುಸರಿಸುವುದರ ಮೂಲಕ ಆನ್ಲೈನ್ ನಲ್ಲಿ ಸೇವಾ ಸಿಂಧು ಪೋರ್ಟಲ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು. ಹಾಗಾದರೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಇರುವಂತಹ ಕ್ರಮಗಳನ್ನು ನೋಡುವುದಾದರೆ.
- ಅಭ್ಯರ್ಥಿಗಳು ಮೊದಲು ಫುಡ್ ಕಾರ್ಟ್ ವೆಹಿಕಲ್ ಸಬ್ಸಿಡಿ ಅಪ್ಲಿಕೇಶನ್ ಎಂಬುದರ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಸೇವಾ ಸಿಂಧು ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.
- ವೆಬ್ ಸೈಟ್ ಗೆ ಭೇಟಿ ನೀಡಿದ ನಂತರ ಮೊದಲ ಬಾರಿಗೆ ಭೇಟಿ ಮಾಡುತ್ತಿರುವವರು ಐಡಿ ಮತ್ತು ಪಾಸ್ವರ್ಡ್ ಅನ್ನು ರಚನೆ ಮಾಡಿಕೊಂಡು ಲಾಗಿನ್ ಆಗಬೇಕಾಗುತ್ತದೆ.
- ಲಾಗಿನ್ ಆದ ನಂತರ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಅದರಲ್ಲಿ ಅರ್ಜಿ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ ಅದರಲ್ಲಿ ಅಗತ್ಯವಾದಂತಹ ವಿವರಗಳನ್ನು ಭರ್ತಿ ಮಾಡಿ ಸಬ್ಮಿಟ್ ಎಂಬುದರ ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು.
ಹೀಗೆ ಅಗತ್ಯ ದಾಖಲಾತಿಗಳನ್ನು ಸಿದ್ಧಪಡಿಸಿಕೊಂಡು ಅಭ್ಯರ್ಥಿಗಳು ತಮ್ಮ ಹತ್ತಿರದ ಗ್ರಾಮವನ್ ಬೆಂಗಳೂರು ಒನ್ ಹಾಗೂ ಕಂಪ್ಯೂಟರ್ ಸೆಂಟರ್ಗಳಿಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು :
ಸಮಾಜ ಕಲ್ಯಾಣ ಇಲಾಖೆ ಅಡಿ ಬರುವ ಡಾಕ್ಟರ್ ಬಿಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸ್ವಾವಲಂಬಿ ಸಾರಥಿ ಯೋಜನೆಯ ಅಡಿಯಲ್ಲಿ ನಾಲ್ಕು ಲಕ್ಷ ಸಬ್ಸಿಡಿಯಲ್ಲಿ ಫುಡ್ ಕಾರ್ಡ್ ವಾಹನವನ್ನು ಖರೀದಿ ಮಾಡಲು ಅರ್ಜಿಯನ್ನು ಸಲ್ಲಿಸಲು ಪ್ರಮುಖ ದಿನಾಂಕಗಳನ್ನು ನೋಡುವುದಾದರೆ.
1.ಈ ದಿನಾಂಕದ ಒಳಗೆ ಅರ್ಜಿ ಸಲ್ಲಿಸಿ : 29 ಡಿಸೆಂಬರ್ 2024
ಪ್ರಮುಖ ದಾಖಲೆಗಳು :
ಸ್ವಾವಲಂಬಿ ಸಾರಥಿ ಯೋಜನೆಯ ಅಡಿಯಲ್ಲಿ ಅಭ್ಯರ್ಥಿಗಳು ವಾಹನವನ್ನು ಖರೀದಿ ಮಾಡಲು 400000 ಸಬ್ಸಿಡಿಯನ್ನು ಪಡೆದುಕೊಳ್ಳಲು ಕೆಲವೊಂದು ಪ್ರಮುಖ ದಾಖಲೆಗಳನ್ನು ಹೊಂದಿರಬೇಕು ಆಗ ಮಾತ್ರ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಪ್ರಮುಖ ದಾಖಲೆಗಳೆಂದರೆ,
- Aadhar card
- Bank passbook
- Income certificate
- Caste certificate
- Passport size photo
- Ration card
ಹೀಗೆ ಈ ಎಲ್ಲಾ ಪ್ರಮುಖ ದಾಖಲೆಗಳನ್ನು ಹೊಂದುವುದರ ಮೂಲಕ ಆನ್ಲೈನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಅರ್ಹತೆಗಳು :
ಸ್ವಾವಲಂಬಿ ಸಾರಥಿ ಯೋಜನೆಯ ಅಡಿಯಲ್ಲಿ ನಾಲ್ಕು ಲಕ್ಷ ಸಬ್ಸಿಡಿಯಲ್ಲಿ ಫುಡ್ ಕಾರ್ಟ್ ವಾಹನವನ್ನು ಖರೀದಿ ಮಾಡಲು ಕೆಲವೊಂದು ಅರ್ಹತೆಗಳನ್ನು ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿದೆ. ಅರ್ಹತೆಗಳೆಂದರೆ,
- ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಲು ಅರ್ಜಿದಾರರು 18 ವರ್ಷ ವಯಸ್ಸಿನವರಾಗಿರಬೇಕು.
- ಅರ್ಜಿದಾರರು ನಿಗಮದಿಂದ ನಿಗದಿಪಡಿಸಿರುವಂತಹ ವರ್ಗಕ್ಕೆ ಅಂದರೆ ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು
- ಈ ಒಂದು ಯೋಜನೆಯ ಅಡಿಯಲ್ಲಿ ಈ ಹಿಂದೆ ನಿಗಮದಿಂದ ಪ್ರಯೋಜನವನ್ನು ಪಡೆದುಕೊಂಡವರು ಮತ್ತೊಂದು ಬಾರಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುವುದಿಲ್ಲ.
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ :
ಹೆಚ್ಚಿನ ಮಾಹಿತಿಗಾಗಿ :
ಅಭ್ಯರ್ಥಿಗಳಿಗೆ ಈ ಯೋಜನೆಗೆ ಸಂಬಂಧಿಸಿ ದಂತೆ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಲು ಸಹಾಯವಾಣಿ ಸಂಖ್ಯೆಯಾದ : 9482300400 ಈ ಸಂಖ್ಯೆಗೆ ಕರೆ ಮಾಡಬಹುದು ಅಥವಾ ನಿಗಮದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದು.
ಒಟ್ಟಾರೆ ಸರ್ಕಾರವು ಫುಟ್ ಕಾರ್ಡ್ ವಾಹನವನ್ನು ಖರೀದಿ ಮಾಡಲು ಸ್ವಾವಲಂಬಿ ಸಾರಥಿ ಯೋಜನೆಯಡಿಯಲ್ಲಿ ಶೇಕಡ 75ರಷ್ಟು ಸಾಲವನ್ನು ಪಡೆದು ಸಹಾಯಧನವನ್ನು ಬ್ಯಾಂಕ್ ಸಹಯೋಗದಲ್ಲಿ ಮತ್ತು ಗರಿಷ್ಠ ನಾಲ್ಕು ಲಕ್ಷದವರೆಗೆ ಸಹಾಯ ಧನವನ್ನು ಅರ್ಹ ಅಭ್ಯರ್ಥಿಗಳಿಗೆ ನೀಡುತ್ತಿದ್ದು ಇದರ ಬಗ್ಗೆ ಹೆಚ್ಚು ಆಸಕ್ತಿ ಹೊಂದಿರುವಂತಹ ಅಭ್ಯರ್ಥಿಗಳು ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಯೋಜನೆಯ ಪ್ರಯೋಜನವನ್ನು ಪಡೆಯಬಹುದು. ಹಾಗಾಗಿ ಸ್ವಾವಲಂಬಿ ಸಾರಥಿ ಯೋಜನೆಯಡಿಯಲ್ಲಿ ನಾಲ್ಕು ಲಕ್ಷ ಸಬ್ಸಿಡಿಯಲ್ಲಿ ಫುಡ್ ಕಾರ್ಡ್ ವಾಹನ ಖರೀದಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ತಿಳಿಸಿ.